ಅಂಕೋಲಾ: ಬೋಲೇರೊ ವಾಹನವೊಂದು ಎದುರಿನಿಂದ ಬರುತ್ತಿದ್ದ ಮೋಟಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೊಸಕಂಬಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮಂಗಳೂರು ನಿವಾಸಿ ಇಂಜಿನಿಯರ್ ಆಶಿಕ್ ಅಶೋಕ ನಾಯ್ಕ (24) ಗಾಯಗೊಂಡ ವ್ಯಕ್ತಿಯಾಗಿದ್ದು ಹಿಲ್ಲೂರು ಕಡೆಯಿಂದ ಬೋಲೇರೊ ಪಿಕಪ್ ವಾಹನ ಸಂಖ್ಯೆ ಕೆ.ಎ 37 ಬಿ 3558 ನ ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಹೊಸಕಂಬಿ ಸೇತುವೆ ಬಳಿ ತೀರ ಬಲಕ್ಕೆ ತಿರುಗಿ ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ಸವಾರನ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಬೊಲೇರೋ ಚಾಲಕ ಬಾದಾಮಿ ತಿಮ್ಮಾಪುರ ನಿವಾಸಿ ತಿಮ್ಮಪ್ಪ ಮಾನಪ್ಪ ಹಲಕುರ್ಕಿ ಎಂಬಾತನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091