ಭಟ್ಕಳ: ತಾಲೂಕಿನ ಗುಳ್ಮಿಯ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ಮೂಲದ ಜಲೀಲ್ ಹುಸೇನ್ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಪೊಲೀಸರು ದಾಳಿ ನಡೆಸಿದ ವೇಳೆ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ.
ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು , ತಾಲೂಕಿನ ಗುಳ್ಮಿಯಲ್ಲಿನ ಮನೆಯೊಂದರಲ್ಲಿ ಆರೋಪಿಗಳು ವಾಸವಾಗಿದ್ದು ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ ಮಾಂಸ ತೆಗೆದುಕೊಳ್ಳುತ್ತಿದ್ದ ಭಟ್ಕಳದ ಇಬ್ರಾಹಿಂ ಎನ್ನುವವನ ಮೇಲೂ ಕೇಸ್ ದಾಖಲಿಸಲಾಗಿದ್ದು, ಈತನ ಪತ್ತೆಗೆ ಕೂಡಾ ಪೊಲೀಸರು ಬಲೆ ಬೀಸಿದ್ದಾರೆ.
ವಿಸ್ಮಯ ನ್ಯೂಸ್, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091