ಕಳ್ಳತನ, ಸುಲಿಗೆ ಸೇರಿ 98 ಪ್ರಕರಣ ಬೇಧಿಸಿದ ಪೊಲೀಸರು: 75 ಲಕ್ಷ ಮೌಲ್ಯದ ಸ್ವತ್ತುಗಳು ಮಾಲೀಕರಿಗೆ ಹಸ್ತಾಂತರ
ಕಾರವಾರ: ಉತ್ತರಕನ್ನಡದ ನಾಲ್ಕು ವಿಭಾಗಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಮತ್ತು ವಂಚನೆ ಪ್ರಕರಣಗಳಲ್ಲಿ ಕಳ್ಳರಿಂದ ವಶಕ್ಕೆ ಪಡೆದ ಸುಮಾರು 75ಲಕ್ಷ ರೂಪಾಯಿ ಸ್ವತ್ತುಗಳನ್ನು ಸಂಬಂಧಪಟ್ಟವರಿಗೆ ಹಸ್ತಾಂತರಿಸಲಾಯಿತು.
ಹೌದು, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇವುಗಳನ್ನು ಸಂಬಂಧಪಟ್ಟರಿಗೆ ಮರಳಿಸುವ ಕಾರ್ಯಕ್ರಮ ಇಲ್ಲಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು. 2020-21ನೇ ಸಾಲಿನಲ್ಲಿ ನಡೆದ 204 ಕಳ್ಳತನ, ಸುಲಿಗೆ ಸಂಬಂಧಿಸಿದಂತೆ ಪೊಲೀಸರು 98 ಪ್ರಕರಣ ಬೇಧಿಸಿದ್ದು,75 ಲಕ್ಷ ರೂಪಾಯಿ ಮೌಲ್ಯದ ಸ್ವತ್ತನ್ನು ಪತ್ತೆ ಮಾಡಿ, ಮಾಲೀಕರಿಗೆ ಮರಳಿಸಿದ್ದಾರೆ.
ದಾಖಲಾದ ಪ್ರಕರಣಗಳ ಪೈಕಿ ಶೇಕಡಾ 50 ಕ್ಕೂ ಹೆಚ್ಚು ಪ್ರಕರಣವನ್ನು ವಿವಿಧ ವಿಭಾಗದ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಮಾತನಾಡಿ ಜಿಲ್ಲೆಯಲ್ಲಿ 204 ಪ್ರಕರಣಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ. ಅಲ್ಲದೆ ಉಳಿದವುಗಳನ್ನು ಶೀಘ್ರದಲ್ಲಿ ಭೇದಿಸುತ್ತೇವೆ ಎಂದರು.
ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 18 ಕೊಲೆ ಪ್ರಕರಣ ನಡೆದಿದೆ. ಅದೆಲ್ಲವನ್ನು ಭೇದಿಸಲಾಗಿದೆ.12 ವಾಹನ ಕಳವು, 21 ಸಾದಾ ಕಳವು ಪ್ರಕರಣಗಳನ್ನೂ ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091