Important
Trending

ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ಭಟ್ಕಳ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮುಷಾ ನಗರದ ಬದ್ರಿಯಾ ಕಾಲೊನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಸದ್ದಾಂ ಹುಸೇನ್ ತಾಲ್ಲೂಕಿನ ಜಾಲಿ ರೋಡ್ ನಿವಾಸಿ ಎಂದು ತಿಳಿದು ಬಂದಿದೆ. ಈತ ಬದ್ರಿಯಾ ಕಾಲೋನಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದ ವೇಳೆ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತ ವ್ಯಕ್ತಿಗಳು ಅವಚ್ಯಾ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ.

ದನ ಕಳ್ಳತನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ತಮ್ಮ ಜನರನ್ನು ಹಿಡಿಸಿದ್ದಿಯಾ? ನಿನ್ನನ್ನು ಕೊಲೆ ಮಾಡಿಯೇ ಹೋಗುತ್ತೇವೆ ಎಂದು ಹೇಳಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾಲಿ ಕ್ರಾಸ್ ಸಮೀಪದ ಲೈಫ್ ಕೇರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಹಲ್ಲೆಯಿಂದ ಸದ್ದಾಂ ಹುಸೇನ್ ಕೈ ಕಾಲು ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಾಗಳಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಘಟನೆ ನಡೆದ ಸ್ಥಳದ ಅಕ್ಕ ಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲಿಸಿ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button