ಭಟ್ಕಳ: ತಾಲ್ಲೂಕಿನ ಕುಂಟುವಾಣಿ ಅರೂಕಿ ಬಳಿ ಸಿಮೆಂಟ್ ರಸ್ತೆ ಮಾಡಲು ಬರುತ್ತಿದ್ದ ಕಾಂಕ್ರೀಟ್ ಮಿಶ್ರಣ ಮಾಡುವ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕಿರಣ ಪವರ್ (21) ಮೃತಪಟ್ಟ ವ್ಯಕ್ತಿಯಾಗಿದ್ದು ವಿಜಯಪುರದ ಮುದೇಬಿಹಾಳ ನಿವಾಸಿ ಎಂದು ತಿಳಿದು ಬಂದಿದೆ.
ವಾಹನವು ರಸ್ತೆ ಬದಿಯಿಂದ ಇಳಿಜಾರು ಪ್ರದೇಶದಲ್ಲಿ ಜಾರಿ ಬಿದ್ದಿದ್ದು ವಾಹನದಲ್ಲಿ 2 ಜನ ಸಿಲುಕಿಕೊಂಡಿದ್ದು ಅಲ್ಲೆ ಅಕ್ಕ ಪಕ್ಕದಲ್ಲಿ ಇದ್ದ ಸಾರ್ವಜನಿಕರು ಕಾಲಿಗೆ ಬಲವಾದ ಏಟು ಬಿದ್ದಿದ್ದ ಚಾಲಕ “ಸುನೀಲ್ ಸುರೇಶ್ ದೊಡ್ಡ ಕಟ್ಟಿ” ಅವರನ್ನು ರಕ್ಷಣೆ ಮಾಡಿ 108 ಆಂಬುಲೆನ್ಸ್ ಮುಖಾಂತರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂದರ್ಭದಲ್ಲಿ ಗ್ರಾಮೀಣ ಠಾಣೆ ಪಿ.ಎಸ್.ಐ ಭರತ ನಾಯಕ,ಪೋಲಿಸ್ ಸಿಬ್ಬಂದಿಗಳು, ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ ರಮೇಶ,ಬಿಜೆಪಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091