ಕಾರವಾರ: ಪೊಲೀಸ್ ಕಾನ್ಸಟೇಬಲ್ ಒಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಾರವಾರದಲ್ಲಿ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಸಾವಿಗೆ ಶರಣಾದ ಡಿ.ಆರ್.ಪೊಲೀಸ್ ಕಾನ್ಸಟೇಬಲ್ ಎಂದು ತಿಳಿದುಬಂದಿದೆ. ಇವರು ಕಳೆದ ನಾಲ್ಕು ದಿನಗಳದಿಂದ ರಜೆ ಮೇಲೆ ಇದ್ದರು. ಇಂದು ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು, ಕಳೆದ ನಾಲ್ಕು ದಿನದ ಹಿಂದೆ ರಜೆ ಹಾಕಿ,ಹೊನ್ನಾವರ ತಾಲೂಕಿನ ಹಳದೀಪುರಕ್ಕೆ ತೆರಳಿದ್ದರು. ರಜೆ ಮುಗಿದ ಬಳಿಕ ಇಂದು ಕಚೇರಿಗೆ ಆಗಮಿಸಿದ್ದು, ಪೊಲೀಸ್ ನೌಕರರ ಸಹಕಾರಿ ಸಂಘದ ಕಚೇರಿಯಲ್ಲಿ ನೇಣಿಗೆ ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತರು ಡಿ.ಎ.ಆರ್ ಪೊಲೀಸ್ ತರಬೇತಿ ಶಾಲೆಯಲ್ಲಿ ಶಿಕ್ಷಕರಾಗಿ ಸಹ ಕಾರ್ಯನಿರ್ವಹಿಸುತ್ತಿದ್ದು, ಕ್ರೀಡಾ ಚಟುವಟಿಕೆಯಲ್ಲಿ ಕೂಡಾ ಉತ್ತಮ ಹೆಸರು ಗಳಿಸಿದ್ದರು.
ವಿಸ್ಮಯ ನ್ಯೂಸ್, ಕಾರವಾರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091