Follow Us On

WhatsApp Group
Important
Trending

ಶಿರಸಿ ಬ್ಲಾಕ್ ಕಿಸಾನ್ ಕಾಂಗ್ರೆಸ್ ನಿಂದ ಶಿವಾನಂದ ಹೆಗಡೆಯವರಿಗೆ ಸನ್ಮಾನ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಶ್ರೀ ರಾಹುಲ್ ಗಾಂಧಿ ಜನ್ಮದಿನಾಚಾರಣೆ ನಿಮಿತ್ತ ನಿವೃತ್ತ ಸೈನಿಕರುಗಳಿಗೆ ಮತ್ತು ರೈತರುಗಳಿಗೆ ಗೌರವ ಸ್ಮರಣೆ, ಲಡಾಖ್ ನ ಗಲ್ವಾನದಲ್ಲಿ ಚೀನಾದ ಸೈನಿಕರೊಂದಿಗಿನ ರ‍್ಷಣೆಯಲ್ಲಿ ವೀರ ಮರಣ ಹೊಂದಿದ ಸೈನಿಕರುಗಳಿಗೆ ಶ್ರದ್ಧಾಂಜಲಿ ಮತ್ತು ಆಯ್ದ ಬಡ ರೈತರುಗಳಿಗೆ ಉಚಿತವಾಗಿ ಬತ್ತದ ಬೀಜಗಳ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಿರಸಿ ಬ್ಲಾಕ್ ಕಿಸಾನ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಶಿವಾನಂದ ಹೆಗಡೆಯವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಾನಂದ ಹೆಗಡೆ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸತೀಶ ನಾಯ್ಕ ಸ್ವಾಗತಿಸಿ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಶ್ ಗೌಡ ವಂದಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕಿಯರಾದ ಸುಷ್ಮಾ ರಾಜಗೋಪಾಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯಕಾರಿಗಳಾದ ವೆಂಕಟೇಶ್ ಹೆಗಡೆ ಹೊಸಬಾಳೆ, ಸುಮಾ ಉಗ್ರಾಣಕರ,ಸೂರ್ಯಪ್ರಕಾಶ ಹೊನ್ನಾವರ,ಶಿರಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಶೆಟ್ಟಿ , ರಾಜ್ಯ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ ನಾಯ್ಕ ಮಂಕಿ, ರಾಜ್ಯ ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ ಶ್ರರೀಪಾದ ಹೆಗಡೆ ಕಡವೆ, ಜಿಲ್ಲಾ ಕಾಂಗ್ರೆಸ್ ಮಧ್ಯಮ ವಕ್ತಾರ ದೀಪಕ ಹೆಗಡೆ,ರಮೇಶ ದುಭಾಶಿ,ಜಿಲ್ಲಾ ಕಾಂಗ್ರೆಸ್ ಮತ್ತು ಕಿಸಾನ್ ಕಾಂಗ್ರೆಸ್ ನ ಹಲವು ಪದಾಧಿಕಾರಿಗಳು,ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಇದ್ದದರು.

Back to top button