ಸಿದ್ದಾಪುರ: ಮಾನಸಿಕ ಅಸ್ವಸ್ಥತತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಜೀವನದಲ್ಲಿ ಜಿಗುಪ್ಸೆಗೊಂಡು ತಾಲೂಕಿನ ಹೂಸುರು ಡ್ಯಾಮಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ತಾಲೂಕಿನ ಹೂಸುರಿನ ಶಶಿಕಲಾ ನಾಯ್ಕ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ಎರಡು ವರ್ಷಗಳ ಹಿಂದೆ ಗಂಡನ ಮನೆಯ ಕೊಟ್ಟಿಗೆ ಸುಟ್ಟು ಹೋಗಿದ್ದು, ಜತೆಗೆ ಟೈಪಾರ್ಡ್ ಆಗಿ ಹೊಲದ ಕೆಲಸ ಬಾಕಿ ಉಳಿದಿರುವುದು ಹಾಗೂ ಗಂಡು ಮಕ್ಕಳು ಇಲ್ಲದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮಾನಸಿಕವಾಗಿ ನೊಂದಿದ್ದಳು.
ಈಕೆಗೆ ಶಿವಮೊಗ್ಗದ ಶ್ರೀಧರ ನರ್ಸಿಂಗ್ ಹೋಮಲ್ಲಿ ಮಾನಸಿಕ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದವಳು ತಡರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ಅವಧಿಯ ನಡುವೆ ಹತ್ತಿರದ ಡ್ಯಾಮಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಆಕೆಯ ಸಹೋದರ ಮಾಬ್ಲೇಶ್ವರ ನಾಯ್ಕ ವಾಟಗಾರ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ಸಿದ್ದಾಪುರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091