ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಲಾರಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆ ವಿದ್ಯಾರ್ಥಿ ಸಾವು
ಹೊನ್ನಾವರ: ತಾಲೂಕಿನ ಹಳದೀಪುರ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಬಳಿ ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗ ಅಜಾಗರುಕತೆಯಿಂದ ಆಗಮಿಸಿದ ಲಾರಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ನಿತಿನ್ ನಾಗರಾಜ್ ಶೇಟ್(16) ಗೆ ಡಿಕ್ಕಿ ಹೊಡೆದಿದ್ದು, ಗಂಬೀರವಾಗಿ ಗಾಯಗೊಂಡಿದ್ದರು.
ಕೂಡಲೇ ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನೆರೆ ಜಿಲ್ಲೆಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸುತ್ತಿದ್ದಾಗ ಮಂಕಿ ಸಮೀಪ ಮೃತಪಟ್ಟಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಲಾರಿ ಚಾಲಕ ಬೆಳಗಾವಿ ಸವದತ್ತಿಯ ಶಬ್ಬರ್ ಸಾಬ್ ವಿರುದ್ಧ ಪ್ರಕರಣ ದಾಖಲಾಗಿದೆ
ವಿಸ್ಮಯ ನ್ಯೂಸ್, ಹೊನ್ನಾವರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091