ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
ಭಟ್ಕಳ : ಆ್ಯಂಬುಲೆನ್ಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸರ್ಪನಕಟ್ಟೆ ಬಳಿ ನಡೆದಿದೆ. ಘಟನೆಯಲ್ಲಿ ಕೋಣಾರ ಬೇಸೆಯ ನಿವಾಸಿ ರಮೇಶ ಜೋಗಿ ಗೊಂಡ (41) ಸಾವನ್ನಪ್ಪಿದ್ದಾನೆ. ಬೈಕಿನಲ್ಲಿದ್ದ ಇನ್ನೋರ್ವ ನಾಗಪ್ಪ ನಾರಾಯಣ ನಾಯ್ಕ ಅಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.
ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಬೆಣಂದೂರು ರಸ್ತೆಯಿಂದ ಸರ್ಪನಕಟೆಯ ಕಡೆಗೆ ಬರುತ್ತಿದ್ದ ಬೈಕ್ ಸವಾರನ ನಡುವೆ ಅಪಘಾತ ಸಂಭವಿಸಿತ್ತು ಎನ್ನಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ನಂತರ ಬೇರೊಂದು ಆ್ಯಂಬುಲೆನ್ಸ್ ನಲ್ಲಿ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091