ಕಾರವಾರ: ಕರಡಿಯೊಂದು ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನಗೆ ಗ್ರಾಮದ ಮಲ್ಲಾಪುರ ಅರಣ್ಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಮಗೌಡ ಎಂಬ ವ್ಯಕ್ತಿ ಕರಡಿ ದಾಳಿಗೆ ಒಳಗಾಗಿದ್ದು, ಇವರನ್ನು ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ