ಕಾರವಾರ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಸೋಲು ಕಂಡಿದ್ದಾರೆ. ಗೆಲುವಿನ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಈ ಗೆಲುವಿನೊಂದಿಗೆ ಬಿಜೆಪಿ ಜಿಲ್ಲೆಯಲ್ಲಿ ಬಿಜೆಪಿ ಇನ್ನಷ್ಟು ಭದ್ರಗೊಂಡಿದ್ದು, ಶಿವರಾಮ್ ಹೆಬ್ಬಾರ್ ಪ್ರಭಾವ ಹೆಚ್ಚಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಗೆಲುವಿನಿಂದ ಉತ್ತರಕನ್ನಡ ಜಿಲ್ಲೆಯಿಂದ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ವಿಧಾನಪರಿಷತ್ ಗೆ ಚುನಾಯಿತ ಪ್ರತಿನಿಧಿಗಳ ಕ್ಷೇತ್ರದಿಂದ ಆಯ್ಕೆಯಾದಂತಾಗಿದೆ.
ಒಟ್ಟು 2907 ಮತ ಚಲಾವಣೆಯಾಗಿದ್ದು, ಇದರಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ 1514 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ 1331 ಮತ ಪಡೆದಿದ್ದಾರೆ. 54 ಮತಗಳು ತಿರಸ್ಕೃತಗೊಂಡಿವೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್