ಕುಮಟಾ: ಕಾರೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಕತಗಾಲದ ಕಪ್ಪೆಗುಳಿ ಸಮೀಪ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೃತ ವ್ಯಕ್ತಿ ಶಿರಸಿ ತಾಲೂಕಿನ ಕಾನಗೋಡಿನ ದಿವಾಕರ ನಾಯ್ಕ ಎನ್ನಲಾಗಿದ್ದು, ವಾಹನ ಚಾಲನೆ ಜೊತೆಗೆ ಈವರು ಕಾನಗೋಡ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು ಎಂದು ತಿಳಿದುಬಂದಿದೆ.
ಕಾರು ಪಲ್ಟಿಯಾಗಿ ದಿವಾಕರ ನಾಯ್ಕ ಸೇರಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದವು. ದಿವಾಕರ ನಾಯ್ಕ ಇವರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಚಿಕಿತ್ಸೆಗಾಗಿ ಘಟನಾ ಸ್ಥಳದಿಂದ ಕುಮಟಾ ಸರಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕರೆತರುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಿವಾಕರ ನಾಯ್ಕ ಅವರು ಪರಿಷತ್ ಚುನಾವಣೆ ಮತ ಎಣಿಕೆ ವೀಕ್ಷಣೆಗೆ ಶಿರಸಿಯಿಂದ ಕಾರವಾರಕ್ಕೆ ತೆರಳಿದ್ದರು. ನಂತರ ವಾಪಸ್ ಶಿರಸಿಗೆ ಬರುತ್ತಿದ್ದ ವೇಳೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ. ಇವರು ಭೀಮಣ್ಣ ನಾಯ್ಕ ಕಟ್ಟಾ ಅಭಿಮಾನಿಯಾಗಿದ್ದರು.
ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ, ಕುಮಟಾ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091