22 ಪ್ರಯಾಣಿಕರಿದ್ದ ಬಸ್‌ಗೆ ಬೆಂಕಿಬಿದ್ದು ಸುಟ್ಟುಭಸ್ಮ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಯಲ್ಲಾಪುರ: ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕಗೊoಡ ಘಟನೆ ತಾಲೂಕಿನ ಜೋಡಕೆರೆ ಬಳಿ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹೌದು, ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ವಾದ ಘಟನೆ ಇಲ್ಲಿನ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈ ನಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿರುವಾಗ ಈ ದುರ್ಘಟನೆ ನಡೆದಿದ್ದು, ಬಸ್ ನಲ್ಲಿ 22 ಪ್ರಯಾಣಿಕರು ಇದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದು, ಬಸ್ ಸುಟ್ಟು ಭಸ್ಮವಾಗಿದೆ. 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version