ಡಿಸೇಲ್ ತುಂಬಿದ ಟ್ಯಾಂಕರ್ ಪಲ್ಟಿ: ಡಿಸೇಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಸಾರ್ವಜನಿಕರು

ಹೊನ್ನಾವರ: ತಾಲೂಕಿನ ಅಳ್ಳಂಕಿಯ ರೈಸ್ ಮಿಲ್ಲಿನ ಸಮೀಪ ಡಿಸೇಲ್ ತುಂಬಿದ ಟ್ಯಾಂಕರ ಪಲ್ಟಿಯಾದ ಘಟನೆ ತಡರಾತ್ರಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 69 ಅಳ್ಳಂಕಿಯ ರೈಸ್ ಮಿಲ್ಲಿನ ಹತ್ತಿರ ಪಲ್ಟಿಯಾದ ಟ್ಯಾಂಕರ್ ನಿಂದ ಪೆಟ್ರೋಲ್ ಹಾಗೂ ಡಿಸೇಲ್ ಸೋರಿಕೆ ಆಗುತ್ತಿರುವ ಮಾಹಿತಿ ದೊರೆತಾಗ, ಸ್ಥಳೀಯರು ಟ್ಯಾಂಕರ್ ನಿಂದ ಸೋರಿಕೆ ಅಗುತ್ತಿರುವ ಡಿಸೇಲ್ ತುಂಬಿಸಿ ಕೊಳ್ಳಲು ಮುಗಿಬಿದ್ದರು.


ಟ್ಯಾಂಕರ್ ಮಂಗಳೂರಿನಿoದ ಹೊರಟು ಸಿದ್ದಾಪುರಕ್ಕೆ ಸಂಚರಿಸುತ್ತಿತ್ತು. ಇಸು ಅಳ್ಳಂಕಿಯಲ್ಲಿ ಪಲ್ಟಿಯಾಗಿದೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ಹೊನ್ನಾವರ ಪಿಎಸೈ ಶಶಿಕುಮಾರ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಸೋರಿಕೆಯಾಗುತ್ತಿರುವ ಡಿಸೇಲ್ ತಡೆದು ಸಂಭವಿಸಬಹುದಾದ ಅಪಾಯ ತಪ್ಪಿಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version