ಮುಖ್ಯಮಂತ್ರಿ, ಸ್ಪೀಕರ್ ಭೇಟಿ ಮಾಡಿದ ಗಣಪತಿ ಉಳ್ವೇಕರ್: ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ

ಕಾರವಾರ : ವಿಧಾನ ಪರಿಷತ್ ನೂತನ ಸದಸ್ಯ ಗಣಪತಿ ಡಿ ಉಳ್ವೇಕರ್ ಅವರು ಬೆಳಗಾವಿಯ ಸ್ವರ್ಣ ಸೌಧದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ, ತನ್ನ ಗೆಲುವಿಗೆ ಶ್ರೀ ರಕ್ಷೆಯಾದ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಹಾಗೂ ಸಭಾಧ್ಯಕ್ಷರ ಜೊತೆ ಚರ್ಚಿಸಿ, ಸಹಕಾರ ನೀಡುವಂತೆ ಮನವಿ ಮಾಡಿದರು..

ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರುಗಳಾದ ಬಿ.ಶ್ರೀರಾಮಲು, ಆನಂದ್ ಸಿಂಗ್, ಸುನಿಲಕುಮಾರ್, ಬೈರತಿ ಬಸವರಾಜು ಮತ್ತು ಪಕ್ಷದ ನಾಯಕರು ಉಪಸ್ಥಿತರಿದ್ದರು. ನಂತರ ತನ್ನ ಗೆಲುವಿಗೆ ಮಹತ್ತರ ಜವಾಬ್ದಾರಿ ನಿಭಾಯಿಸಿದ್ದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗದೊಂದಿಗೆ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಜಿಲ್ಲೆಯ ಕುಳುವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಆಗುತ್ತಿರುವ ಸಮಸ್ಯೆ ವಿವರಿಸಿ, ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ಮರಾಠಿ ಸಮುದಾಯದ ಪ್ರಮುಖ ರಾಮ ನಾಯ್ಕ, ಅಣ್ಣಪ್ಪ ಮರಾಠಿ, ಉಲ್ಲಾಸ ಮರಾಠಿ ಮೊದಲಾದವರು ಉಪಸ್ಥಿತರಿದ್ದರು. ಸಾಮಾನ್ಯ ಜನರ ಕಷ್ಟಗಳಿಗೆ ಧ್ವನಿಯಾಗುವ ರೀತಿಯಲ್ಲಿ , ಉಳ್ವೇಕರ ಆರಂಭದಲ್ಲಿಯೇ ಉತ್ತಮ ಹೆಜ್ಜೆ ಇಟ್ಟು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಮಸ್ಯೆ ನಿವಾರಣೆಗೆ ಹೊಸ ಭರವಸೆ ಮೂಡಿಸುತ್ತಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲ

Exit mobile version