ಕೋಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಯ ಪಕ್ಕ ಬಿದ್ದಿದ್ದ ಕೋಳಿಗಳನ್ನು ಹೊತ್ತೊಯ್ದ ಅಕ್ಕಪಕ್ಕದ ಗ್ರಾಮದ ಜನರು: ಸಾವಿರಾರು ಕೋಳಿಗಳ ಸಾವು
ಯಲ್ಲಾಪುರ: ಕೋಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಕೋಳಿಕೇರಿ ಗ್ರಾಮದ ಉರುಳಿಬಿದ್ದಿದೆ. ಹೌದು, ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಮಾಂಸದ ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಉರುಳಿಬಿದ್ದಿದೆ.
ಕೊಳಿಕೇರಿ ಸಮೀಪವೇ ಅಪಘಾತ ಸಂಭವಿಸಿದ್ದು, ಗ್ರಾಮದ ಕೆಲವು ಜನ ಸೇರಿದಂತೆ, ಅಕ್ಕಪಕ್ಕದ ಇನ್ನಿತರ ಗ್ರಾಮದ ಜನ ಬಿದ್ದಿರುವ ಜೀವಂತ ಕೋಳಿಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಅಪಘಾತದಲ್ಲಿ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಗೆ ಯಾವುದೇ ರೀತಿಯ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಆದರೆ, ಲಕ್ಷಾಂತರ ಬೆಲೆ ಬಾಳುವ ಸಾವಿರಾರು ಕೋಳಿಗಳು ಮೃತಪಟ್ಟಿವೆ.
ವಿಸ್ಮಯ ನ್ಯೂಸ್, ಕಾರವಾರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091