ತಡರಾತ್ರಿ ಮನೆಯ ಮುಂದೆ ಅನುಮಾನಾಸ್ಪದವಾಗಿ ಓಡಾಟ: ಕಾಂಪೌoಡ್ ಜಿಗಿದು ಓಡಿದಹೋದ ಮುಸುಕುಧಾರಿ


ರಾತ್ರಿ ಸಮಯದಲ್ಲಿ ಪಟ್ಟಣದಾದ್ಯಂತ ಅಪರಿಚಿತ ವ್ಯಕ್ತಿಗಳ ಓಡಾಟ ಕಂಡು ಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. ಪಟ್ಟಣದ ಸಿದ್ದನಬಾವಿಯ ಸಮೀಪ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ, ಅಪರಿಚಿತ ವ್ಯಕ್ತಿಯ ಓಡಾಟ ಸೆರೆಯಾಗಿದೆ. ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ ಬ್ಯಾಟರಿ ಬೆಳಕಿನಲ್ಲಿ ಮನೆಗಳ ಬಾಗಿಲಿಗೆ ಬೆಳಕು ಬಿಟ್ಟು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳುತ್ತಿದ್ದು, ಇದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ವ್ಯಕ್ತಿ ಮನೆಯ ಹೊರಗಡೆ ರಸ್ತೆಯಲ್ಲಿ ತಡರಾತ್ರಿ ಆ ಕಡೆಯಿಂದ ಈ ಕಡೆಗೆ ಓಡಾಟ ನಡೆಸುತ್ತಿದ್ದ . ಈ ವೇಳೆ ಹೊರಗಡೆ ಯಾರೋ ಮುಸುಕುಧಾರಿಯಾಗಿ ತಿರುಗಾಡುತ್ತಿರುವುದನ್ನು ಗಮನಿಸಿ, ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಕ್ಕ-ಪಕ್ಕದ ಮನೆಯವರೆಲ್ಲರೂ ವ್ಯಕ್ತಿಯ ಗುರುತು ಪತ್ತೆ ಮಾಡಲು ಹೊರಡೆ ಬಂದಾಗ, ಮುಸುಕುಧಾರಿ ಮತ್ತೊಂದು ಮನೆಯ ಕಾಂಪೌoಡ್ ಜಿಗಿದು ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಪಿಎಸ್‌ಐ ಆನಂದಮೂರ್ತಿ ನೇತೃತ್ವದಲ್ಲಿ ಪೊಲೀಸರು ಆಗಮಿಸಿ, ಮಾಹಿತಿ ಕಲೆ ಹಾಕಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version