ಬೀಚ್‌ನಲ್ಲಿ ಈಜಲು ತೆರಳಿದ ವೇಳೆ ಅಲೆಗೆ ಸಿಲುಕಿ ಅಸ್ವಸ್ಥ: ಯುವತಿಯ ಪ್ರಾಣ ಉಳಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಗೋಕರ್ಣ: ಇಲ್ಲಿನ ಬೀಚ್‌ನಲ್ಲಿ ಈಜಲು ತೆರಳಿದ ಬೆಂಗಳೂರು ಮೂಲದ ಓರ್ವ ಪ್ರವಾಸಿ ಯುವತಿ, ಅಲೆಗೆ ಸಿಲುಕಿ ಅಸ್ವಸ್ಥಳಾದ ಘಟನೆ ನಡೆದಿದೆ.
ಇಂಜಿನಿಯರಿoಗ್ ಓದುತ್ತಿರುವ ಭೂಮಿಕಾ ತನ್ನ ಗೆಳೆಯರ ಜೊತೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಇಲ್ಲಿಯ ಓಂ ಬೀಚ್ ಕಡಲತೀರದಲ್ಲಿ ಈಜುವಾಗ ಸಮುದ್ರ ಸುಳಿಗೆ ಸಿಕ್ಕಿ ತೀವ್ರ ಅಸ್ವಸ್ಥಳಾಗಿದ್ದಳು.

ಈ ವೇಳೆ ಅಲ್ಲಿಯೇ ಇದ್ದ ಲೈಫ್ ಗಾರ್ಡ್ ಸಿಬ್ಬಂದಿ ಯುವತಿಯನ್ನು ರಕ್ಷಿಸಿದ್ದಾರೆ. ಕೂಡಲೇ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು, ವೈದ್ಯರಾದ ಡಾ.ಜಗದೀಶ ನಾಯ್ಕ ಹಾಗೂ ಸಿಬ್ಬಂದಿ ಮುಕ್ತಾ ತಲಗೇರಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಯುವತಿಯ ಪ್ರಾಣವನ್ನ ಉಳಿಸಿದ್ದಾರೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version