ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಕುಮಟಾ: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ವಾಲಗಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಬಿ ಗೌಡ ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.

ಹೊಸಬಿ ಗೌಡ, ಕುಮಟಾ ಕಡೆಯಿಂದ ಮನೆಗೆ ತೆರಳತ್ತಿದ್ದ ವೇಳೆ ಬೈಕ್ ಅತಿವೇಗದಿಂದ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version