ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ 400ಕ್ಕೂ ಹೆಚ್ಚು ಮೊಬೈಲ್ ವಶಕ್ಕೆ: ಬ್ಯಾಗ್‌ನಲ್ಲಿತ್ತು ಸಿಗರೇಟ್, ಲೈಟರ್! ಎಚ್ಚರಿಗೂ ಡೋಂಟ್ ಕೇರ್ ಹಿನ್ನಲೆ ಪರಿಶೀಲನೆ

ಶಿರಸಿ: ಕ್ಲಾಸಿನೊಳಗೆ ಮೊಬೈಲ್ ತರುವಂತಿಲ್ಲ ಎಂದು ಪದೇ ಪದೇ ಎಚ್ಚರಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಬಿಸಿಮುಟ್ಟಿಸಿದ್ದಾರೆ. ಹೌದು, ಇಲ್ಲಿನ ನಿಲೇಕಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಲಾಸಿನಲ್ಲಿಯೂ ಮೊಬೈಲ್ ಬಳಕೆ ಮಾಡುತ್ತಿದ್ದರು ಎನ್ನಲಾಗಿದ್ದು, ಪ್ರಾಂಶುಪಾಲರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ 400ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ರಿಂಗಾಗಿದ್ದು, ಹೀಗಾಗಿ ಪ್ರಾಂಶುಪಾಲರು, ಉಪನ್ಯಾಸಕರು ದಿಢೀರ್ ಭೇಟಿ ಪರಿಶೀಲನೆ ನಡೆದ ವೇಳೆ 400ಕ್ಕೂ ಹೆಚ್ಚು ಮೊಬೈಲ್ ಸಿಕ್ಕಿದೆ. ಬರೀ ಮೊಬೈಲ್ ಮಾತ್ರವಲ್ಲದೆ. ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಸಿಗರೇಟ್ ಪ್ಯಾಕೇಟ್, ಲೈಟರ್ ಸಹ ಪತ್ತೆಯಾಗಿದೆ ಎನ್ನಲಾಗಿದೆ. ಕಾಲೇಜಿನ ಕಟ್ಟುನಿಟ್ಟಿನ ಕ್ರಮದ ಸುದ್ದಿ ತಿಳಿದು ನಗರಠಾಣೆ ಪೊಲೀಸರು ಕಾಲೇಜಿಗೆ ಆಗಮಿಸಿದ್ದು, ಕಾಲೇಜು ಪ್ರಾಚಾರ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version