ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ. ಎಲ್ಲಾ ಸಿಬ್ಬಂದಿಗಳಿಗೂ ಕ್ವಾರಂಟೈನ್

ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಬಂದಿರುವುದು ದೃಢವಾಗಿದ್ದು, ಸದ್ಯ ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಸಿಬ್ಬಂದಿಯಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎನ್ನಲಾಗಿದೆ. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ದೃಢವಾಗಿತ್ತು. ಸದ್ಯ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಪಾಸಿಟಿವ್ ಬಂದಿರುವ ಸಿಬ್ಬಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. 7 ದಿನಗಳ ಬಳಿಕ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ.

Exit mobile version