ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ

ಭಟ್ಕಳ : ಅಕ್ರಮವಾಗಿ ವಾಹನವೊಂದರಲ್ಲಿ ಎರಡು ಜಾನುವಾರು ಸಾಗಾಟ ಮಾಡುತ್ತಿರುವ ವೇಳೆ ಪುರವರ್ಗ ರಾಷ್ಟ್ರೀಯ ಹೆದ್ದಾರಿ 66ರ ಚರ್ಚ್ ಎದುರು ವಾಹನ ತಡೆದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ ಬಂಧಿತ ಆರೋಪಿಗಳು ಮುಜಾಪರ್ ಹುಸೇನ್ ಹಾಗೂ ಅಬ್ದುಲ್ ರೆಹಮಾನ್ ಎಂದು ತಿಳಿದು ಬಂದಿದೆ.

ಆರೋಪಿಗಳು ಯಾವುದೇ ಪಾಸ್ ಅಥವಾ ಪರವಾನಿಗೆ,ದಾಖಲೆ ಇಲ್ಲದೆ ವದೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಎರಡು ಹೋರಿಗಳನ್ನು ಹಿಂಸಾತ್ಮಕವಾಗಿ ಹಾಗು ಇಕ್ಕಟ್ಟಾಗಿ ಸಾಗಾಟ ಮಾಡಿಕೊಂಡು ಹೋಗುವ ವೇಳೆ ಪೊಲೀಸರು ದಾಳಿ ಮಾಡಿ ಆರೋಪಿಯ ಬಂಧಿಸಿದ್ದಾರೆ. ಈ ವೇಳೆ ಒಂದು ಹೋರಿ ತಪ್ಪಿಸಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ , ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version