ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ

ಹೊನ್ನಾವರ: 50 ರಿಂದ 55 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಳಿಗ್ಗೆ 10-30 ಗಂಟೆ ನಡುವಿನ ಅವಧಿಯಲ್ಲಿ ಅರಬಿ ಸಮುದ್ರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತದೇಹವು ಸಮುದ್ರದಲ್ಲಿ ತೇಲುತ್ತಾ ಮಂಕಿಯ ಮಡಿ ಗುಡ್ಡದ ಕೆಳಗೆ ಅರಬಿ ಸಮುದ್ರದಲ್ಲಿ ಇದ್ದಾಗ, ಮೀನುಗಾರಿಕೆಗೆ ಹೋದ ಸ್ಥಳೀಯರು ಮೃತದೇಹವನ್ನು ನೋಡಿದ್ದಾರೆ.

ಅಲ್ಲದೆ, ಹೊನ್ನಾವರದ ಕರಾವಳಿ ಕಾವಲು ಪಡೆ ಪೊಲೀಸ ಠಾಣೆಗೆ ಮಾಹಿತಿ ನೀಡಿದ್ದಾರೆ. ಅರಬಿ ಸಮುದ್ರದಲ್ಲಿ ಪೆಟ್ರೋಲಿಂಗ್ ಮಾಡುತ್ತಿದ್ದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹವನ್ನು ಸ್ಥಳದಿಂದ ಎತ್ತಿ ಕೊಂಡು ಮಂಕಿ ಮಡಿಯ ಸಮುದ್ರ ದಡಕ್ಕೆ ತಂದಿದ್ದಾರೆ. ಮಂಕಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮಂಕಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ಸು, ಪತ್ತೆಗಾಗಿ ಮಂಕಿ ಪೋಲಿಸರು ಕೋರಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version