Important
Trending

ಕಾರಿನಲ್ಲಿ ವಿದ್ಯಾರ್ಥಿನಿ ಅಪಹರಣ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾಲೇಜಿಗೆ ಬಿಡುವುದಾಗಿ ನಂಬಿಸಿ ವಿದ್ಯಾರ್ಥಿನಿಯ ಅಪಹರಣ

ಶಿರಸಿ: ಮನೆಯಿಂದ ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬoಧಿಸಿ ಶಿರಸಿ ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಸೊರಬದ ಆನವಟ್ಟಿಯ ಜಬೀವುಲ್ಲಾ ಶುಕೂರಸಾಬ್ ಧಾರವಾಡಕರ್ (22) ಬಂಧಿತ ಆರೋಪಿ.

ಈತನ ವಿರುದ್ದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋದ ಬಗ್ಗೆ ಸೋಮವಾರ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು, ಸಾಗರದಲ್ಲಿ ಆರೋಪಿಯನ್ನು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬಾಲಕಿಯನ್ನು ಪಾಲಕರಿಗೆ ಒಪ್ಪಿಸಿದ್ದಾರೆ. ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಗೆ ಕಾರಿನಲ್ಲಿ ಬಿಡುತ್ತೇನೆ ಎಂದು ನಂಬಿಸಿ, ವಿದ್ಯಾರ್ಥಿನಿಯನ್ನು ಅಪರಿಸಿದ್ದ. ಈ ಕುರಿತು ಪೋಷಕರು ಪ್ರಕರಣ ದಾಖಲಿಸಿದ್ದರು.

ವಿಸ್ಮಯ ನ್ಯೂಸ್, ಶಿರಸಿ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button