ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ನೇತ್ರದಾನ ಜಾಗ್ರತಿ ಅಭಿಯಾನ

ಭಟ್ಕಳ: ಸ್ಪಂದನ ಚಾರಿಟೇಬಲ್ ಟ್ರಸ್ಟ್, ರೋರ‍್ಯಾಕ್ಟ್ ಕ್ಲಬ್ ಹಾಗೂ ಯೂತ್ ರೆಡ್ ಕ್ರಾಸ್ ಸಹಯೋಗoದೊಂದಿಗೆ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ನೇತ್ರದಾನ ಜಾಗ್ರತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಭಿಯಾನದ ಕುರಿತು ಮಾತನಾಡಿದ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಶ್ರೀ ರಾಘವೇಂದ್ರ ನಾಯ್ಕ್ ಮಾತನಾಡಿ ಎಲ್ಲ ದಾನಕ್ಕಿಂತ ನೇತ್ರದಾನ ಪವಿತ್ರವಾದದ್ದು, ಮನುಷ್ಯ ಸತ್ತ ನಂತರ ಮಣ್ಣಾಗಿ ಅಥವಾ ಸುಟ್ಟು ಹೋಗುವ ಕಣ್ಣುಗಳು ಅಂಧರ ಬಾಳಿಗೆ ಬೆಳಕಾಗಬೇಕೆಂದರು. ನೇತ್ರದಾನ ಮಾಡುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿದ್ಯಾರ್ಥಿಗಳ ಸಂವಾದದಲ್ಲಿ ಉತ್ತರಿಸಿದರು.

ಇದೇ ಸಂದರ್ಭದಲ್ಲಿ ಬಿ.ಎ ಪ್ರಥಮ ವರ್ಷದ ದಿವ್ಯಾಂಗ ವಿದ್ಯಾರ್ಥಿಯಾದ ಶಾಯಲ್ ಗೊಮ್ಸ್ ಅವರಿಗೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ವೈಟ್ ಕೆನ್ ಸ್ಟಿಕ್ ನೀಡಲಾಯಿತು. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿದ ಪ್ರಾಂಶುಪಾಲರಾದ ಶ್ರೀನಾಥ ಪೈ ಮಾತನಾಡಿ, ವಿದ್ಯಾರ್ಥಿಗಳು ನೇತ್ರದಾನದ ಬಗ್ಗೆ ಸಮಾಜದಲ್ಲಿ ಜಾಗ್ರತಿ ಮೂಡಿಸಬೇಕೆಂದರು. ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ಆನಂದ ದೇವಾಡಿಗ ಉಪಸ್ಥಿತರಿದ್ದರು. ರೋರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಪ್ರೇಮಾನಂದ ಸ್ವಾಗತಿಸಿದರು, ಕ್ಲಬ್‌ನ ಕಾರ್ಯದರ್ಶಿ ರಶ್ಮಿ ಮಹಾಲೆ ವಂದಿಸಿದರು. ಮನಿಷ ಮೆಸ್ತಾ ಕಾರ್ಯಕ್ರಮ ನಿರೂಪಿಸಿದರು.

Exit mobile version