ಕುಮಟಾ: ಅತಿವೇಗವಾಗಿ ಬಂದ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಸಿನಿಮೀಯ ರೀತಿಯಲ್ಲಿ ಬೈಕ್ ನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಹಾನಗಲ್ ಮೂಲದ ಬೈಕ್ ಸವಾರರಾದ ರಾಮಚಂದ್ರ, ಗಣೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಆಶ್ಚರ್ಯಕರ ರೀತಿಯಲ್ಲಿ ಬಚಾವಾಗಿದ್ದಾರೆ. ಇವರು ಹಾನಗಲ್ ಕುಮಟಾಕ್ಕೆ ಬರುತ್ತಿದ್ದ ವೇಳೆ, ಅತಿವೇಗದಿಂದ ಬಂದು ಲಾರಿಗೆ ಗುದ್ದಿದ್ದು, ಈ ವೇಳೆ, ಲಾರಿಯ ಒಳಭಾಗದಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಜಾರಿಬಿದ್ದು, ಅದೃಷ್ಟ ಎಂಬoತೆ ಪ್ರಾಣ ಉಳಿದಿದೆ.
ತಾಲೂಕಿನ ಹೆದ್ದಾರಿ ತಂಡ್ರಕುಳಿ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರನ ಅತಿವೇಗ ಮತ್ತು ನಿರ್ಲಕ್ಷ ತನದ ಚಾಲನೆಯೇ ಈ ದುರ್ಘಟನೆ ಕಾರಣ ಎನ್ನಲಾಗಿದೆ. ಗಾಯಗೊಂಡ ಬೈಕ್ ಸವಾರ ಮತ್ತು ಹಿಂಬoದಿ ಸವಾರನನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಸ್ಮಯ ನ್ಯೂಸ್, ಕುಮಟಾ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091