ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತೆರಳುತ್ತಿದ್ದ ವಾಹನದ ಟಯರ್ ಸ್ಫೋಟ: ನಿಯಂತ್ರಣ ತಪ್ಪಿ ಬೈಕ್ ಗೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಹೊನ್ನಾವರ : ಮದುವೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನದ ಮುಂಭಾಗದ ಟಯರ್ ಸ್ಫೋಟಗೊಂಡ ಪರಿಣಾಮವಾಗಿ ವಾಹನ ನಿಯಂತ್ರಣ ತಪ್ಪಿ ಬೈಕ್ ಗುದ್ದಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮತೀರ್ಥ ಕ್ರಾಸ್ ಬಳಿ ರಾತ್ರಿಯ ಸಮಯದಲ್ಲಿ ಸಂಭವಿಸಿದೆ.

ಕುಮಟಾ ಮಾರ್ಗವಾಗಿ ಹೊನ್ನಾವರ ಕಡೆ ಬರುತ್ತಿದ್ದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಬುಧವಾರ ರಾತ್ರಿ 8.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೆ ಟೆಂಪೋ ಟ್ರಾವೆಲರ್ ಗುದ್ದಿದೆ. ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version