Follow Us On

WhatsApp Group
Important
Trending

ರಾಜ್ಯದಲ್ಲಿ ಮತ್ತೆ ನೈಟ್ ಕರ್ಪ್ಯೂ: ಸಭೆ ಸಮಾರಂಭಗಳಿಗೆ 300 ಜನರ ಮಿತಿ: ಹೊಸ ಮಾರ್ಗಸೂಚಿ ಹೇಗಿದೆ ನೋಡಿ?

ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ. ಇದನ್ನು ಆರೋಗ್ಯ ಸಚಿವ ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್ ಅವರು, ರಾತ್ರಿ 10 ಗಂಟೆಯಿoದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊoಡವರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆಯಿoದಲೇ ಎಲ್ಲವೂ ಬಂದ್ ಆಗಲಿದೆ. ರಾತ್ರಿ 10 ಗಂಟೆಯಿoದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ.

ಅಂತರ್ ರಾಜ್ಯ ಪ್ರಯಾಣಕ್ಕಷ್ಟೆ ರಾತ್ರಿ 10 ಗಂಟೆ ನಂತರ ಅವಕಾಶವನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದರೆ, ಯಾವುದೇ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿಲ್ಲ. ಸಭೆ ಸಮಾರಂಭಗಳಿಗೆ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ, ಹೊಟೇಲ್ ಸಿಬ್ಬಂದಿಗೆ ಎರಡು ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ರಾತ್ರಿ 10 ಗಂಟೆಯ ನಂತರ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button