ಹೊನ್ನಾವರ: ತಾರಿ ದೋಣಿ ಹತ್ತುವ ವೇಳೆ ವ್ಯಕ್ತಿಯೊಬ್ಬ ದೋಣಿಯಿಂದ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಬಳ್ಕೂರಿನಲ್ಲಿ ನಡೆದಿದೆ. ತಾಲೂಕಿನ ಶರಾವತಿ ನದಿಯ ಮೂಲಕ ಬಳ್ಕೂರಿನಿಂದ ಜಲವಳ್ಳಿ ಕರ್ಕಿಗೆ ದೋಣಿಯಲ್ಲಿ ತೆರಳಲು ವ್ಯಕ್ತಿಯೊಬ್ಬ ಬಳ್ಕೂರಿನಲ್ಲಿ ದೋಣಿ ಹತ್ತುವ ಸಂದರ್ಭದಲ್ಲಿ ಕಾಲೂಜಾರಿ ಬಿದ್ದು ನೀರುಪಾಲಾಗಿದ್ದಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೆ ಸುಳಿವು ಸಿಕ್ಕಿಲ್ಲ. ನೀರುಪಾಲಾದ ವ್ಯಕ್ತಿ ಜಲವಳ್ಳಿ ಕರ್ಕಿಯ ಜಯಂತ ನಾಯ್ಕ ಎಂದು ಹೇಳಲಾಗುತ್ತಿದೆ. ಜಯಂತ ನಾಯ್ಕ ಅಡುಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ದೋಣಿ ಹತ್ತುವಾಗ ಆಯತಪ್ಪಿ ಕಾಲುಜಾರಿ ಬಿದ್ದು ನೀರುಪಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091