ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು

ಕುಮಟಾ: ಟಿಪ್ಪರ್ ವೊಂದು ಬೈಕ್‌ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಹೊಸ ಹೆರವಟ್ಟಾದ ರೈಲ್ವೆ ಸೇತುವೆ ಸಮೀಪ ನಡೆದಿದೆ. ಪಟ್ಟಣದ ಹೊಸ ಹೆರವಟ್ಟಾದ ರೈಲ್ವೆ ಬ್ರಿಡ್ಜ್ ಬಳಿ ಚಂದಾವರ ಕಡೆಯಿಂದ ಕುಮಟಾಕ್ಕೆ ಬರುತ್ತಿದ್ದ ಟಿಪ್ಪರೊಂದು ಚಂದಾವರ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಹೊನ್ನಾವರದ ದೇವಿಕೇರಿ ನಿವಾಸಿ ನಿಲೇಶ ದೇಶಭಂಡಾರಿ (25) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕಾಗಿ ಕಡತೋಕಾಕ್ಕೆ ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ಶವವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version