ಭಟ್ಕಳ: ಮದಿರೆ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಮೃತ ವ್ಯಕ್ತಿಯು 40-50 ವರ್ಷ ಎಂದು ಅಂದಾಜಿಸಲಾಗಿದ್ದು, ಮುರುಡೇಶ್ವರ ಭದ್ರಾಂಭಿಕೇಶ್ವರ ವಸತಿಗೃಹದ ಹೊರಗೆ ನಿಂತಿದ್ದ ಕಾರಿನ ಕನ್ನಡಿಗೆ ತಾಗಿ ನಿಂತಿರುವಾಗಲೇ ಕುಸಿದು ಬಿದ್ದು ಮೃತ ಪಟ್ಟಿದ್ದಾನೆ.
ಮೃತ ವ್ಯಕ್ತಿ ಕನ್ನಡ ಹಾಗೂ ಕೊಂಕಣಿ ಮಿಶ್ರಿತ ಭಾಷೆಯಲ್ಲಿ ಮಾತನಾಡುತ್ತಿದ್ದ ಎಂದು ತಿಳಿದುಬಂದಿದೆ. ಈತ ತಿಳಿ ಕಂದು ಬಣ್ಣದ ಅರ್ಧ ತೋಳಿನ ಅಂಗಿ, ಕೆಂಪು ಚುಕ್ಕಿ ಇರುವ ನೀಲಿ ಬಣ್ಣದ ಚಡ್ಡಿ ಧರಿಸಿದ್ದು. ಮೃತರ ಬಗ್ಗೆ ಮಾಹಿತಿ ಇದ್ದವರು ಕೂಡಲೇ ಮುರುಡೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವoತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ವಿಸ್ಮಯ ನ್ಯೂಸ್, ಉದಯ ಎಸ್ ನಾಯ್ಕ, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091