ಕಾರವಾರ: ಕಾಳಿನದಿಯಲ್ಲಿ ಈಜಾಡಲು ತೆರಳಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. 8ನೇ ತರಗತಿಯಲ್ಲಿ ಓದುತ್ತಿದ್ದ ನಿಶಾಂತ್ (14) ಎಂಬ ಬಾಲಕ ತನ್ನಿಬ್ಬರು ಸ್ನೇಹಿತರೊಂದಿಗೆ ಈಜಾಡಲು ಕಾಳಿನದಿಗೆ ತೆರಳಿದ್ದ. ಈ ವೇಳೆ ನಿಶಾಂತ್ ಮರಳಿ ಬಂದಿರಲಿಲ್ಲ. ತದನಂತರ ಘಟನೆಯ ಮಾಹಿತಿಯನ್ನು ಮಲ್ಲಾಪುರ ಪೊಲೀಸ್ ಠಾಣೆಗೆ ತಿಳಿಸಲಾಗಿದೆ.
ಬೆಳಿಗ್ಗೆಯಿಂದಲೇ ಕಾಳಿನದಿಯಲ್ಲಿ ಬಾಲಕನ ಹುಡುಕಾಟಕ್ಕೆ ತೀವ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬೋಟಿನಲ್ಲಿ ಮಲ್ಲಾಪುರದಿಂದ ಕೆರವಡಿಯವರೆಗೆ ತೀವ್ರ ಶೋಧ ಕಾರ್ಯ ನಡೆಸಿದ್ದರೂ ಬಾಲಕನ ಸುಳಿವು ದೊರೆಯದ ಕಾರಣ, ಪೊಲೀಸ್ ಇಲಾಖೆಯವರು ನೌಕಾದಳದ ಈಜು ಪರಿಣಿತರನ್ನು ಕರೆಸಿದ್ದರು. ತೀವ್ರ ಶೋಧದ ನಂತರ ಆತನ ಶವ ಪತ್ತೆಯಾಗಿದೆ. ಮೃತ ಬಾಲಕ ಕೈಗಾದ ಸಿಬ್ಬಂದಿಯೊಬ್ಬರ ಪುತ್ರ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091