ಅಂಕೋಲಾ: ಕೋವಿಡ್ ಲಾಕ್ ಡೌನ್ ಮತ್ತು ನೆರೆ ಹಾವಳಿಯಿಂದಾಗಿ ಜನರು ಎರಡು ವರ್ಷಗಳಿಂದ ಸಾಕಷ್ಟು ಸಂಕಷ್ಟದಲ್ಲಿದ್ದು ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಾದರೂ ಎಲ್ಲಾ ಇಲಾಖೆಯ ಅಧಿಕಾರಿಗಳ ಪಾಲ್ಗೊಳ್ಳುವಿಕೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವ ಕೆಲಸ ನಡೆಯಲಿ ಎಂದು ಗ್ರಾಮಸ್ಥರು ಬಂದರೆ , ಕೆಲ ಪ್ರಮುಖ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳದೇ ಅಸಡ್ಡೆ ತೋರುತ್ತಿರುವುದು ಬೇಸರದ ಸಂಗತಿ ಎಂದು ಡೋಂಗ್ರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮ ಸಭೆಯಲ್ಲಿ, ಕೆಲ ಜನ ಜನಪ್ರತಿನಿಧಿಗಳು ಹಾಗೂ ಹಲವು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಸಾರ್ವಜನಿಕರು ಗ್ರಾಮ ಸಭೆಗೆ ಆಗಮಿಸಿ ವಿವಿಧ ಇಲಾಖೆಗಳ ಅಧಿಕಾರಿಗಳ ಬರುವಿಕೆಗೆ ಕಾದಿದ್ದರು.
ಆದರೆ ರೈತರ ಸಮಸ್ಯೆ ಕುರಿತು ಚರ್ಚೆ ನಡೆಸಬೇಕಾದ ಪ್ರಮುಖ ಕೆಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಗೈರು ಹಾಜರಾಗಿರುವುದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ರೈತರು ಸಾಕಷ್ಟು ಸಮಸ್ಯೆಯನ್ನು ಆಲಿಸ ಬೇಕಾದ ಅರಣ್ಯ ಇಲಾಖೆ ಅಧಿಕಾರಿಗಳೂ ಪಾಲ್ಗೊಳ್ಳದಿರುವುದು ,ಗ್ರಾಮ ಸಭೆಯ ಪ್ರಾಮುಖ್ಯತೆಯನ್ನು ನಿರ್ಲಕ್ಷ್ಯ ಮಾಡುವ ಮೂಲಕ ಕಾಟಾಚಾರದ ಸಭೆ ನಡೆಸುವುದು ಸರಿಯಲ್ಲ. ಈ ಕುರಿತು ಸಂಬಂಧಿತ ಮೇಲಾಧಿಕಾರಿಗಳು ಗಮನಹರಿಸುವರೇ,ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. ಎಂಬ ಪ್ರಶ್ನೆ ಹಲವರದ್ದಾಗಿದೆ.
ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳದೇ ಹಿಂದುಳಿದ ಭಾಗಗಳ ಜನರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಅವರ ಧೋರಣೆ ಇದೇ ರೀತಿ ಮುಂದುವರಿದರೆ ಗ್ರಾಮ ಸಭೆಯನ್ನು ಬರಕಾಸ್ತುಗೊಳಿಸಿ ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣ ಅಧಿಕಾರಿಗಳಿಗೆ ದೂರು ನೀಡಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ವರೆಗೆ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸ ಬೇಕಾದಿತು ಎಂದು ಡೋಂಗ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು,ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ಎಚ್ಚರಿಸಿದ್ದಾರೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ