Important
Trending

ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಪೊಲೀಸ್ ಜೀಪ್ ಪಲ್ಟಿ: ಚಾಲಕನಿಗೆ ತೀವ್ರ ಗಾಯ

ಸಿದ್ದಾಪುರ : ಪೊಲೀಸ್ ಜೀಪ್ ಪಲ್ಟಿಯಾಗಿ, ಚಾಲಕನಿಗೆ ತೀವ್ರ ಗಾಯವಾದ ಘಟನೆ ತಾಲೂಕಿನ ನಿಡಗೋಡ ಬಳಿ ನಡೆದಿದೆ.. ದುರ್ಘಟನೆಯಲ್ಲಿ ಪಿ. ಎಸ್. ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಸಿದ್ದಾಪುರ ತಾಲೂಕಿನ ನಿಡಗೋಡ ಬಳಿ ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಅಪಘಾತವಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಚಾಲಕ ಯಲ್ಲಪ್ಪ ಕಾಗವಾಡೆನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಣಾಪಾಯದಿಂದ ಪಿ. ಎಸ್. ಐ. ಮಹಂತೇಶ ಕುಂಬಾರ ಪಾರಾಗಿ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button