Important
Trending

ಮೂರು ಕಾರುಗಳ ಮಧ್ಯೆ ಭೀಕರ ಸರಣಿ ಅಪಘಾತ: ಓರ್ವ ಸಾವು

ಯಲ್ಲಾಪುರ: ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಹಿಟ್ಟಿನಬೈಲ್ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪಿರಿಯಾಪಟ್ಟಣದ ಸುಭಾಷ್ ಸ್ವಾಮಿ ಗೌಡ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಒಟ್ಟು 13 ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕೆಲವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ಸೂಚಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button