ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ: ಪೊಲೀಸರ ಕಾರ್ಯಾಚರಣೆ

ಶಿರಸಿ: ಇಲ್ಲಿನ ಮಾರುತಿ ದೇವಸ್ಥಾನದ ಹತ್ತಿರ ದಾಳಿ ನಡೆಸಿದ ಪೊಲೀಸರು ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಗಾಂಜಾ ಸಮೇಹ ಸಾಗಾಟಕ್ಕೆ ಬಳಸಿದ ಬೈಕ್ ವಶಪಡಿಸಿಕೊಂಡಿದ್ದಾರೆ. ದಾಸನಕೊಪ್ಪದಿಂದ ಉಸುರಿ ಮಾರ್ಗವಾಗಿ ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಅಭಿಷೇಕ್ ಶ್ರೀಧರ ಹೆಗಡೆ, ಗಣೇಶ ನಗರ ಮತ್ತು ಮಂಜುನಾಥ ಉದಯ್ ಮಾನೆ ಎನ್ನುವವರಿಂದ ಗಂಜಾ ಬಳಸಿಕೊಳ್ಳಲಾಗಿದೆ.

ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರ ನಿರ್ದೇಶನದಲ್ಲಿ,ಹೆಚ್ಚುವರಿ ಅಧೀಕ್ಷಕ ಬದರಿನಾಥ ಅವರ ಮಾರ್ಗದರ್ಶನದಲ್ಲಿ,ಶಿರಸಿ ಉಪಾಧೀಕ್ಷಕ ರವಿ ನಾಯ್ಕ ಮತ್ತು ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಶಿರಸಿ ಗ್ರಾಮೀಣ ಠಾಣಾಧಿಕಾರಿ ಈರಯ್ಯ ಡಿ.ಎಸ್.ಅವರುಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ವಿಸ್ಮಯ ನ್ಯೂಸ್, ಶಿರಸಿ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version