ಕಾರವಾರ: ತಾಲ್ಲೂಕಿನ ಹೋಟೆಗಾಳಿ ಗ್ರಾಮದ ಭೀಮಕೋಲ್ ವ್ಯಾಪ್ತಿಯ ಅರಣ್ಯದಲ್ಲಿ ಅಕ್ರಮವಾಗಿ ಸಾಗಿಸುವ ಉದ್ದೇಶದಿಂದ ಗೋವಾ ಮದ್ಯವನ್ನು ಹುದುಗಿಸಿಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಚಿತ್ತಾಕುಲ ಠಾಣಾ ಪೊಲೀಸರು ದಾಳಿ ಮಾಡಿ ಮದ್ಯವನ್ನು ಜಪ್ತುಪಡಿಸಿಕೊಂಡಿದ್ದಾರೆ.
ಗ್ರಾಮದ ನಿವಾಸಿ ಕಿರಣ್ ಪಡುವಳಕರ್ ಎನ್ನುವವರು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಭೀಮಕೋಲ್ ಅರಣ್ಯ ಪ್ರದೇಶದಲ್ಲಿ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದಾಗಿ ಮಾಹಿತಿ ಲಭ್ಯವಾದ ಹಿನ್ನಲೆ ಕದ್ರಾ ಸಿಪಿಐ ಗೋವಿಂದರಾಜ.ಟಿ.ದಾಸರಿ ನೇತೃತ್ವದಲ್ಲಿ ದಾಳಿ ನಡೆಸಿದ್ದರು.
ಈ ವೇಳೆ ಅರಣ್ಯದಲ್ಲಿ ಅಕ್ರಮವಾಗಿ ಹುದುಗಿಸಿಡಲಾಗಿದ್ದ ಸುಮಾರು 21,400 ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯಿದೆಯಂತೆ ಕಲಂ 32, 34 ಪ್ರಕರಣ ದಾಖಲಿಸಿ ಆರೋಪಿ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091