Important
Trending

ಕಾಲೇಜು ವಿದ್ಯಾರ್ಥಿನಿಯರಿಂದ ಮದ್ಯ ಸೇವಿಸಿ, ಪವಿತ್ರ ಸ್ಥಳದಲ್ಲಿ ಅಸಭ್ಯ ವರ್ತನೆ: ಸರಿಯಾಗೇ ಬುದ್ಧಿ ಕಲಿಸಿದ ಕಾಲೇಜು ಆಡಳಿತ ಮಂಡಳಿ

ಶಿರಸಿ: ಇತ್ತಿಚಿನ ದಿನದಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೋಜು, ಮಸ್ತಿ ಪ್ರಕರಣ ಹೆಚ್ಚುತ್ತಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ಹೆಚ್ಚಾಗಿ ಪ್ರೀತಿ, ಪ್ರೇಮ, ಪ್ರಣಯ, ಗಾಂಜಾ ಇವೆಲ್ಲ ಹೆಚ್ಚು ಸದ್ದು ಮಾಡುತ್ತಿದೆ. ಹೌದು, ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಮತ್ತು ಪವಿತ್ರ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿ ಮದ್ಯ ಸೇವಿಸಿದ ಪ್ರಕರಣಕ್ಕೆ ಸಂಬoದಿಸಿದoತೆ ಆರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತ್ತು ಮಾಡಿ, ನಿರ್ಧಾರ ಪ್ರಕಟಿಸಲಾಗಿದೆ.

ಕೆಲವು ವಿದ್ಯಾರ್ಥಿಗಳು ಕಾಲೇಜು ಸಮವಸ್ತ್ರದಲ್ಲೇ ಮದ್ಯ ಸೇವಿಸಿ ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ್ದಾರೆ. ಅಲ್ಲದೆ, ಕಾಲೇಜು ಆವರಣದಲ್ಲೂ ಕೆಟ್ಟದಾಗಿ ನಡೆದುಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಟಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆಡಳಿತ ಮಂಡಳಿ ಕಠಿಣ ನಿರ್ಧಾರ ಕೈಗೊಂಡಿದೆ.

ಶಾಲಾ ವಿದ್ಯಾರ್ಥಿಗಳು ಕೇವಲ ಪಿಕ್‌ನಿಕ್ ಗೆ ಹೋಗಿದ್ದರೆ ಅದಕ್ಕೆ ಯಾರ ಅಭ್ಯಂತರವೂ ಇರುತ್ತಿರಲಿಲ್ಲ. ಆದರೆ ಈ ವೇಳೆ ಮದ್ಯದ ಬಾಟಲಿ ಹಿಡಿದು ಕಣಿದು ಕುಪ್ಪಳಿಸುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button