ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಬೈಕ್: ರಸ್ತೆ ಮೇಲೆ ಬಿದ್ದ ಇಬ್ಬರಿಗೆ ಗಂಭೀರ ಗಾಯ
ಭಟ್ಕಳ: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅಡ್ಡ ಬಂದಿದ್ದ ನಾಯಿಯನ್ನು ತಪ್ಪಿಸಲು ಹೋದ ಪರಿಣಾಮ ಬೈಕ್ ಅಪಘಾತವಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ಳಿಯ ಬಂದರ್ ರೋಡ್ ನಲ್ಲಿ ರವಿವಾರ ನಡೆದಿದೆ. ಗಾಯಗೊಂಡ ಬೈಕ್ ಸವಾರ ಮಂಜುನಾಥ ಸುಕ್ರ ಗೊಂಡ (31) ಆತನ ತಾಯಿ ದುರ್ಗಿ ಗೊಂಡ (50) ಹಾಗೂ ಸಹೋದರನ ಆರು ವರ್ಷದ ಮಗ ಅಕಿಲ್ ಗೊಂಡ ಎಂದು ತಿಳಿದು ಬಂದಿದೆ.
ಈತ ತನ್ನ ತಾಯಿ ಹಾಗೂ ಸಹೋದರಣ ಮಗನೊಂದಿಗೆ ಸಂಶುದ್ದೀನ್ ವೃತ್ತದಿಂದ ತಲಗೋಡ್ ಕಡೆಗೆ ತೆರಳುತ್ತಿದ್ದ ವೇಳೆ ಅಡ್ಡ ಬಂದಿದ್ದ ನಾಯಿಯನ್ನು ತಪ್ಪಿಸಲು ಹೋದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿದೆ. ಈ ವೇಳೆ ಬೈಕ್ ರಸ್ತೆ ಮೇಲೆ ಬಿದ್ದು ಅಪಘಾತವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆ ಪೋಲಿಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091