ಟೆಂಪೋ ಪಲ್ಟಿ: ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು: ಹಲವರಿಗೆ ಗಾಯ

ಹೊನ್ನಾವರ: ಟೆಂಪೊವೊoದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಸ್ಥಳದಲ್ಲೇ ಓರ್ವ ಯುವತಿ ಮೃತಪಟ್ಟ ಘಟನೆ ತಾಲೂಕಿನ ಮಾಗೋಡ ಗ್ರಾಮದ ಕುಟ್ಟೋಡಿ ಕ್ರಾಸ್ ಬಳಿ ನಡೆದಿದೆ. ಇಡಗುಂಜಿ ನಗರಬಸ್ತಿಕೇರಿ ರಸ್ತೆಯ ಮೂಲಕ ಸಂಶಿಯ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಟೆಂಪೋವನ್ನು ಚಲಾಯಿಸಿಕೊಂಡು ಬಂದ ವೇಳೆ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ ಎನ್ನಲಾಗಿದೆ.

ಈ ವೇಳೆ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಪ್ರಿನ್ಸಿಟಾ ಪ್ರಾನ್ಸಿಸ್ ಮಿರಾಂಡ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪಿಯದಾದ ಲೋಪಿಸ್, ರೇಕಲ್ ಮಿರಾಂಡ, ಕೇರಾ ಮಿರಾಂಡ, ರೇಖಾ ಮಾರಿಯೋ ಮಿರಾಂಡ, ಲೆನ್ಸಿಟಾ ಮಿರಾಂಡ, ಪಿಲೋಮಿನಾ ಮಿರಾಂಡ ಇವರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version