Important
Trending

ಶಾಲೆಗಳು ಬಂದ್: ವೀಕೇಂಡ್ ಕರ್ಪ್ಯೂ: ಹೊಸ ಮಾರ್ಗಸೂಚಿ ಹೇಗಿದೆ ನೋಡಿ?

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಹಲವು ಹೊಸ ರೂಲ್ಸ್ ಗಳನ್ನು ಜಾರಿ ಮಾಡಲಾಗಿದೆ. ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ‌ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸುದ್ದಿಗೋಷ್ಠಿ ನಡೆಸಿ, ಸಚಿವ ಆರ್ ಅಶೋಖ್ ಮತ್ತು ಡಾ ಕೆ ಸುಧಾಕರ್ ಮಾಹಿತಿ ನೀಡಿದರು. ಬೆಂಗಳೂರು ಮತ್ತು ರಾಜ್ಯಕ್ಕೆ ಪ್ರತ್ಯೇಕ ರೂಲ್ಸ್ ಜಾರಿಗೊಳಿಸಲಾಗಿದೆ. ಗುರುವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಬಂದ್ ಆಗಲಿದೆ. 10 ಮತ್ತು 12ನೇ‌ ತರಗತಿ ಹೊರತು ಪಡಿಸಿ, ಉಳಿದ ಶಾಲೆಗಳು ಬಂದ್ ಆಗಲಿದೆ. ನಾಳೆ 10 ಗಂಟೆಯಿಂದ ಈ ರೂಲ್ಸ್ ಜಾರಿಯಾಗಲಿದೆ.

ರಾಜ್ಯಾದ್ಯಂತ ವೀಕೆಂಟ್ ಕರ್ಪ್ಯೂ ಜಾರಿಯಾಗಲಿದೆ. ಜೊತೆಗೆ ನೈಟ್ ಕರ್ಪ್ಯೂ ಕೂಡಾ ಇರಲಿದೆ. ಹೊಟೇಲ್ ಮತ್ತು ಬಾರ್ ಗಳಲ್ಲಿ ಶೇಕಡಾ 50 ರಷ್ಟು ರೂಲ್ಸ್ ಇರಲಿದೆ. ಮದುವೆ ಹೊರಾಂಗಣಕ್ಕೆ 200 ಜನಕ್ಕೆ ಅವಕಾಶ, ಒಳಗಾಂಗಣ 100 ಜನಕ್ಕೆ ಅವಕಾಶ. ಜಾತ್ರೆ, ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶವಿಲ್ಲ. ಅಂತ್ಯಕ್ರಿಯೆಯಲ್ಲೂ ಜನರಿಗೆ ಮಿತಿ. ಸಾರಿಗೆ ಸಂಚಾರದ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ. ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ‌ ನ್ಯೂಸ್

Back to top button