ಕೌಟುಂಬಿಕ ಕಲಹ? ವಿಷ ಸೇವಿಸಿ ಸಾವಿಗೆ ಶರಣಾದ ಅವಳಿ ಜವಳಿ ಅಕ್ಕ ತಂಗಿಯರು

ಹೊನ್ನಾವರ: ಕೌಟುಂಬಿಕ ಕಲಹದಿಂದ ಬೇಸರಗೊಂಡ ಇಬ್ಬರು ಅವಳಿ ಜವಳಿ ಅಕ್ಕ ತಂಗಿಯರು ವಿಷಸೇವಿಸಿ ಸಾವಿಗೆ ಶರಣಾದ ಘಟನೆ ತಾಲೂಕಿನ ಇಡಗುಂಜಿ ಕುಳಮನೆಯಲ್ಲಿ ನಡೆದಿದೆ. ವಿಷ ಸೇವಿಸಿ ಸಾವಿಗೆ ಯತ್ನಿಸಿದ ವೇಳೆ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟ ಸೋದರಿಯರು ಮೇಘಶ್ರೀ ಸುಬ್ಬಯ್ಯ ನಾಯ್ಕ ಮತ್ತು ಭಾಗ್ಯಶ್ರೀ ಸುಬ್ಬಯ್ಯ ನಾಯ್ಕ ಇವರು ಅವಳಿ-ಜವಳಿ ಸೋದರಿಯರು ಎಂದು ಹೇಳಲಾಗುತ್ತಿದೆ. ಸೋಮವಾರದಂದು ಇವರು ವಿಷ ಸೇವಿಸಿದ್ದರು. ನಂತರ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ. ತಂದೆ ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿಯ ಕೌಟುಂಬಿಕ ಜಗಳದಿಂದ ಬೆಸತ್ತು ಈ ಯತ್ನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಮಂಕಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version