ಕಾರವಾರ: ಗೋವಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯೊಳಗಿನ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕ್ರಮ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋವಿಡ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲಾಡಳಿತ ಸಂಪೂರ್ಣವಾಗಿ ಸಿದ್ಧತೆಗಳನ್ನು ನಡೆಸಿದೆ.
ಜಿಲ್ಲೆಯ ಕುಮಟಾ, ಹಾಗೂ ಅಂಕೋಲಾ ತಾಲೂಕು ಆಸ್ಪತ್ರೆ ಆವರಣದಲ್ಲಿ ಬಿಟ್ಟರೇ ಉಳಿದ ಎಲ್ಲಾ ತಾಲೂಕಿನ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್‌ಗಳನ್ನ ನಿರ್ಮಾಣ ಮಾಡಲಾಗಿದೆ. ಆಕ್ಸಿಜನ್ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಹೆಚ್ಚಿರುವ ಹಿನ್ನಲೆಯಲ್ಲಿ ಶಾಲೆ ಕಾಲೇಜುಗಳು ರಜೆ ಘೋಷಣೆ ಮಾಡಿರುವುದರಿಂದ ಜಿಲ್ಲೆಯತ್ತ ಬೆಂಗಳೂರಿನಿoದ ಬರುವವರ ಸಂಖ್ಯೆ ಹೆಚ್ಚಾಗಬಹುದು. ಈ ನಿಟ್ಟಿನಲ್ಲಿ ಬೆಂಗಳೂರಿನಿoದ ಜಿಲ್ಲೆಗೆ ಬರುವವರ ಮೇಲೆ ನಿಗಾ ಇಡಲಾಗುವುದು ಎಂದರು.
ಪ್ರವಾಸಕ್ಕಾಗಿ ಜಿಲ್ಲೆಗೆ ಬರುವವರು ಕಡ್ಡಾಯವಾಗಿ ಎರಡು ಡೋಸ್ ಸರ್ಟಿಫಿಕೇಟ್ ಇಟ್ಟುಕೊಂಡು ಬರಬೇಕು. ಇನ್ನು ಮಹಾರಾಷ್ಟ್ರ, ಕೇರಳ, ಹಾಗೂ ಗೋವಾದವರಿಗೆ ಎರಡು ಡೋಸ್ ಮತ್ತು ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಇಟ್ಟುಕೊಂಡಿರಬೇಕು. ದೇವಸ್ಥಾನದಲ್ಲಿ ಸಹ ಐವತ್ತು ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮದುವೆ ಸಮಾರಂಭದಲ್ಲಿ ಒಳಾಂಗಣ ನೂರು ಜನಕ್ಕೆ, ಹೊರಾಂಗಣದಲ್ಲಿ ನಡೆಯುವ ಮದುವೆಗೆ 200 ಜನಕ್ಕೆ ಮಾತ್ರ ಅವಕಾಶ ಇದೆ. ಅಲ್ಲದೆ, ಜಿಲ್ಲೆಯಲ್ಲಿ ಯಾವುದೇ ರ‍್ಯಾಲಿ, ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.
ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ,ಮುರುಡೇಶ್ವರ ದೇವಸ್ಥಾನ,ಇಡಗುಂಜಿಯ ದೇವಸ್ಥಾನ,ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ 50 ಜನರ ಸರತಿಯಂತೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದ್ದು ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಅಥವಾ ಎರಡು ಡೋಸ್ ಲಸಿಕೆ ಪಡೆದ ಸರ್ಟಿಫಿಕೇಟ್ ಇರಬೇಕು. ಆದರೆ ಗೊವಾ,ಮಹಾರಾಷ್ಟ್ರ,ಕೇರಳ ರಾಜ್ಯದವರಿಗೆ 72 ತಾಸಿನ ಆರ್.ಟಿ.ಪಿ.ಸಿ.ಆರ್ ಕಡ್ಡಾಯವಾಗಿರುತ್ತದೆ.
ವಿಸ್ಮಯ ನ್ಯೂಸ್, ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.