ಹೊನ್ನಾವರ: ಕೋವಿಡ್ ಆತಂಕ ಹಿನ್ನಲೆಯಲ್ಲಿ ಸರ್ಕಾರದ ನೂತನ ಆದೇಶದಂತೆ ಪುರಾಣ ಪ್ರಸಿದ್ಧ ಇಡಗುಂಜಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ತಾಲೂಕಿನ ಪುರಾಣ ಪ್ರಸಿದ್ಧ ದೇವಾಲಯದಲ್ಲಿ ಒಂದಾದ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿಯ ದೇವಾಲಯದಲ್ಲಿ ಇಂದಿನಿoದ ದೇವರಿಗೆ ಸಾರ್ವಜನಿಕರು ಸಲ್ಲಿಸುವ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಕೋವಿಡ್ ಹಿನ್ನಲೆಯಲ್ಲಿ ಸರ್ಕಾರದ ಪರಿಷ್ಕ್ರತ ಆದೇಶದಂತೆ ಮುಂದಿನ ಆದೇಶದ ವರೆಗೆ ದೇವಾಲಯದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸಾದ ಭೋಜನವನ್ನು ಸಹ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯ ಜೊತೆ ಬುಧವಾರ ಜಿಲ್ಲಾಧಿಕಾರಿಗಳ ಸಭೆಯ ಬಳಿಕ ಕಟ್ಟನಿಟ್ಟಾಗಿ ಕೋವಿಡ್ ನಿಯಮವಳಿಯನ್ನು ಪಾಲನೆ ಬಗ್ಗೆ ಆದೇಶದ ಅನುಗುಣವಾಗಿ ಇಂದಿನಿoದಲೇ ದೇವಾಲಯದಲ್ಲಿ ಭಕ್ತರಿಂದ ನಡೆಯುವ ಎಲ್ಲಾ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಇದೇ ವೇಳೆ, ಕೋವಿಡ್ ಮಾರ್ಗಸೂಚಿಯಂತೆ ನಾಳೆಯಿಂದ ಮುಂದಿನ ಆದೇಶದ ವರೆಗೆ ಶಿರಸಿ ಮಾರಿಕಾಂಬಾ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಯಾವುದೇ ಸೇವೆಗಳು ಇರುವುದಿಲ್ಲ. ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿಯ ದರ್ಶನ ಪಡೆಯಲು ಕೋರಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,