ಮಾಸ್ಕ ಧರಿಸದೆ ಓಡಾಡಿದರೆ ಹುಷಾರ್: ಸ್ಥಳದಲ್ಲೇ ಕೋವಿಡ್ ಟೆಸ್ಟ್: ದಂಡ ವಸೂಲಿ

ಕುಮಟಾ: ಕೋವಿಡ್ 3ನೇ ಅಲೆಯ ಆತಂಕ ಎದುರಾದ ಹಿನ್ನಲೆ ಪುರಸಭೆ, ಪೊಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸುವ ಜೊತೆಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೌದು, ತಹಶೀಲ್ದಾರ್ ಕಚೇರಿಗೆ ವಿವಿಧ ಕಾರ್ಯಗಳಿಗಾಗಿ ಮಾಸ್ಕ್ ಧರಿಸದೇ ಆಗಮಿಸಿದ್ದ ಸಾರ್ವಜನಿಕರಿಗೆ ನೂರು ರೂಪಾಯಿ ದಂಡ ವಿಧಿಸುವ ಜೊತೆಗೆ ಕೋವಿಡ್ ಪರೀಕ್ಷೆಗೊಳಪಡಿಸಿದ ಘಟನೆ ನಡೆದಿದೆ.

ಈ ಕಾರ್ಯಾಚರಣೆಯಲ್ಲಿ 15 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 20 ಮಂದಿಗೆ ದಂಡ ವಿಧಿಸಿ, 2 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಈ ಕಾರ್ಯಾಚರಣೆ ಪಟ್ಟಣಕ್ಕೂ ವ್ಯಾಪಿಸಲಿದ್ದು, ಸಾರ್ವಜನಿಕ ಸ್ಥಳಗಳಲ್ಲೂ ದಂಡ ವಿಧಿಸುವ ಮೂಲಕ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಲಿದೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಯಮ ಪಾಲಿಸದೆ ತಹಶೀಲ್ದಾರ ಕಚೇರಿಗೆ ಬಂದಿದ್ದ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಲಾಗಿದೆ. ವಿವಿಧ ಕೆಲಸ ಕಾರ್ಯಗಳಿಗಾಗಿ ತಹಶೀಲ್ದಾರ್ ಕಚೇರಿಗೆ ಬರುವ ವ್ಯಕ್ತಿಗಳು ಮಾಸ್ಕ ಧರಿಸದೇ ಇದ್ದರೆ, ಸ್ಥಳದಲ್ಲಿ ನೂರು ರೂ. ದಂಡ ವಿಧಿಸಿ, ಉಚಿತ ಮಾಸ್ಕ್ ನೀಡಲಾಗಿದೆ. ಅಲ್ಲದೇ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version