Important
Trending

ವಾರಾಂತ್ಯದ ಕರ್ಪ್ಯೂ: 314 ಮಂದಿ ವಿರುದ್ಧ ಕೇಸ್ ದಾಖಲು: ತಹಶೀಲ್ದಾರ್ ಕಚೇರಿಯ 9 ಸಿಬ್ಬಂದಿಗೆ ಪಾಸಿಟಿವ್

ಕಾರವಾರ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯಾದ್ಯಂತ ಪೊಲೀಸರು ನಿಯಮ ಪಾಲಿಸದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ವಾರಾಂತ್ಯದ ಕರ್ಪ್ಯೂ ಜಾರಿಯಾಗಿದ್ದರೂ ಮಾಸ್ಕ್ ಧರಿಸದೇ ಓಡಾಡುತ್ತಿದ್ದವರ 314 ಮಂದಿ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 34,400 ದಂಡ ವಸೂಲಿ ಮಾಡಲಾಗಿದೆ. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಂಡ ವಿಧಿಸಲಾಗುತ್ತಿದೆ.

ಇದೇ ವೇಳೆ ಕುಮಟಾ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಕಚೇರಿಯ 9 ಸಿಬ್ಬಂದಿಗೆ ಪಾಸಿಟಿವ್ ಬಂದಿದೆ. ಇವರಿಗೆ ಒಂದು ವಾರ ಹೋಮ್ ಕ್ವಾರನ್‌ಟೈನ್ ವಿಧಿಸಲಾಗಿದ್ದು, ಇದೀಗ ಇತರ ಸಿಬ್ಬಂದಿಗೂ ಆತಂಕ ಶುರುವಾಗಿದೆ. ಕುಮಟಾ ತಾಲೂಕಿನಲ್ಲೂ ಕೋವಿಡ್ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಮುಂಜಾಗೃತಾ ಕ್ರಮಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button