Important
Trending

ಎರಡನೇ ಬಾರಿಗೆ ಆತ್ಮಹತ್ಯೆಗೆ ಯತ್ನ: ವಿಷ ಸೇವಿಸಿದ ಯುವತಿ ಚಿಕಿತ್ಸೆ ಫಲಿಸದೆ ಸಾವು

ಗೋಕರ್ಣ: ವಿಷ ಕುಡಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರುದ್ರಪಾದದ ಯುವತಿ ಕವಿತಾ ದೇವು ಗೌಡ (20) ಮೃತಪಟ್ಟ ಯುವತಿಯಾಗಿದ್ದು, ಮಧ್ಯಾಹ್ನ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಕಳುಹಿಸಲಾಗಿತ್ತು,

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ಪಿ.ಐ. ವಸಂತ ಆಚಾರ್ಯ, ಪಿ.ಎಸ್.ಐ. ಸುಧಾ ಅಘನಾಶಿನಿ ಕುಮಟಾಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಇದೇ ಯುವತಿ ಹಿಂದೆ ಸಹ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button