ಪ್ರತಿದಿನ ದುಪ್ಪಟ್ಟಾಗುತ್ತಿದೆ ಕೋವಿಡ್ ಕೇಸ್? ಆತಂಕ ಮತ್ತಷ್ಟು ಹೆಚ್ಚಿನ ಪಾಸಿಟಿವ್ ಪ್ರಕರಣ

ಕಾರವಾರ: ದೇಶದಲ್ಲಿ ಕೋವಿಡ್ ಆರ್ಭಟ ಹೆಚ್ಚುತ್ತಿದ್ದಂತೆಯೇ ರಾಜ್ಯದ ಉತ್ತರಕನ್ನಡ ಜಿಲ್ಲೆಯಲ್ಲೂ ಕೋವಿಡ್ ವ್ಯಾಪಿಸುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಶುಕ್ರವಾರ 37 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದ್ದರೆ, ನಿನ್ನೆ 51 ಕೇಸ್ ದೃಢಪಟ್ಟಿತ್ತು. ಇಂದು ಜಿಲ್ಲೆಯಾದ್ಯಂತ 94 ಕೋವಿಡ್ ಕೇಸ್ ಕಾಣಿಸಿಕೊಂಡಿದೆ.

ಹೌದು, ಜಿಲ್ಲಾಡಳಿತದ ಹೆಲ್ತ್ ಬುಲೆಟಿನ್ ನ ಪ್ರಕಾರ ಇಂದು 94 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಸಂಭವಿಸಲಿಲ್ಲ ಎನ್ನಲಾಗಿದೆ. ಕಾರವಾರದಲ್ಲಿ 49, ಭಟ್ಕಳದಲ್ಲಿ 8, ಅಂಕೋಲಾದಲ್ಲಿ 4, ಕುಮಟಾದಲ್ಲಿ 10, ಹೊನ್ನಾವರ 6, ಶಿರಸಿಯಲ್ಲಿ 11, ಸಿದ್ದಾಪುರದಲ್ಲಿ 2, ಯಲ್ಲಾಪುರದಲ್ಲಿ 1, ಹಳಿಯಾಳದಲ್ಲಿ 2 ಹಾಗು ಜೋಯಿಡಾದಲ್ಲಿ 1 ಕೇಸ್ ಸೇರಿ ಒಟ್ಟು 94 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version