Follow Us On

WhatsApp Group
Important
Trending

ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಆಕಸ್ಮಿಕವಾಗಿ ಬಿತ್ತು ಬೆಂಕಿ: ಅನಾಹುತ ತಪ್ಪಿಸಿದ ಅಗ್ನಿಶಾಮಕ ಸಿಬ್ಬಂದಿ

ಭಟ್ಕಳ : ತಾಲೂಕಿನ ಹಳೆಯ ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜೆ ವೇಳೆಗೆ ಗುಡ್ಡಕ್ಕೆ ಬೆಂಕಿ ತಗುಲಿದ್ದು ಇದನ್ನು ಗಮನಿಸಿದ ಅಲ್ಲಿನ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಾಳಿಯಿಂದಾಗಿ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದ್ದರಿಂದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬರುವವರೆಗೆ ಬೆಂಕಿ ನಂದಿಸಲು ಸತತ ಪ್ರಯತ್ನ ನಡೆಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸುತ್ತಲೂ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button